ಅತ್ತೆಯೋರ್ವಳು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಯ ಜೀವನೋಪಾಯಕ್ಕೆ ಹೊಸ ದಾರಿ ಮಾಡಿಕೊಟ್ಟು ಸುದ್ದಿಯಾಗಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕು ನೀರಲಗಿಯಲ್ಲಿ ಅತ್ತೆಯೊಬ್ಬರು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿಯನ್ನು ಮಾಡಿಕೊಟ್ಟಿದ್ದಾರೆ. ಈ ಮೂಲಕ ಆದರ್ಶ ಅತ್ತೆಯಾಗಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇದೀಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಯೋಜನವನ್ನು ಪಡೆದು ಸೊಸೆಯ ಬದುಕಿಗೆ ಅತ್ತೆ ಹೊಸ ದಾರಿ ಕಂಡುಕೊಂಡಿದ್ದಾರೆ. ಈ ಮೂಲಕ ಈ ಅತ್ತೆ ಸೊಸೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ತನ್ನ ಊರಿನ ಗ್ರಾಮಸ್ಥರಿಗೆ ಮಹಿಳೆಯೊಬ್ಬರು ಹೋಳಿಗೆ ಊಟ ಹಾಕಿ ಸುದ್ದಿಯಾಗಿದ್ದರು. ಈ ವಿಚಾರ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.