ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಮಹತ್ತರವಾದ ಬೆಳವಣಿಗೆ ನಡೆದಿದ್ದು,
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ , ಮಾಜಿ ಸಚಿವ ನಾಗೇಂದ್ರ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಪ್ರಕರಣ ಕೂಡ ದಾಖಲಾಗಿದೆ.
ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಉತ್ತರ ನೀಡಿರುವುದಾಗಿ ಕಲ್ಲೇಶ್ ಹೇಳಿದ್ದಾರೆ. ಮಾಜಿ ಸಚಿವ ಬಿ ನಾಗೇಂದ್ರ, ಸಿಎಂ ಸಿದ್ದರಾಮಯ್ಯ ಹಣಕಾಸು ಇಲಾಖೆಯನ್ನು ಹೆಸರು ಹೇಳುವಂತೆ ಕಣ್ಣನ್ ಕೇಳಿಕೊಂಡರು ಎಂದು ಅವರು ಆರೋಪಿಸಿದ್ದಾರೆ.
ಇದಲ್ಲದೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಮಿತ್ತಲ್ ಬೆದರಿಕೆ ಹಾಕಿದ್ದಾರೆ ಮತ್ತು ಇಡಿ ಸಹಾಯ ಬೇಕಾದರೆ ಮುಖ್ಯಮಂತ್ರಿ, ನಾಗೇಂದ್ರ ಮತ್ತು ಹಣಕಾಸು ಇಲಾಖೆ ಹೆಸರು ಹೇಳುವಂತೆ ಹೇಳಿದ್ದಾರೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ.