Breaking:

ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ!

ಕೋಲಾರ: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಒತ್ತಾಯಿಸುವುದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬುವರು ದೂರು ನೀಡಿದ್ದಾರೆ.

Share this article

ಟಾಪ್ ನ್ಯೂಸ್