ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ತೇರ್ಗಡೆಗೊಳ್ಳಲು ಅಂಗವಿಕಲತೆ ಪ್ರಮಾಣಪತ್ರಗಳನ್ನು ಫೋರ್ಜರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಯುಪಿಎಸ್‌ಸಿ ಇಂದು ಪ್ರಕರಣ ದಾಖಲಿಸಿದೆ. ಆಕೆಯು ವಂಚನೆಗೈದಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಆಕೆಯ ಆಯ್ಕೆಯನ್ನು ರದ್ದುಗೊಳಿಸಲು ಮತ್ತು ಭವಿಷ್ಯದಲ್ಲಿ ಆಕೆಗೆ ಪರೀಕ್ಷೆ ಬರೆಯಲು ಅನುಮತಿ ನೀಡದಂತೆ ಆಯೋಗ ಆಕೆಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.