Breaking:

ಕುರಿ ಮಾಂಸವನ್ನು ನಾಯಿ ಮಾಂಸ ಎಂದು ರಾದ್ದಾಂತ: ಪುನೀತ್ ಕೆರೆಹಳ್ಳಿ ವಿರುದ್ಧ ಮೂರು ಎಫ್ಐಆರ್

ಕುರಿ ಮಾಂಸದ ಸಾಗಾಟದ ವೇಳೆ ನಾಯಿ ಮಾಂಸ ಸಾಗಾಟ ಎಂದು ಆರೋಪಿಸಿ ರಾದ್ದಾಂತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ, ಇದೀಗ ಪ್ರಕರಣಕ್ಕೆ ಸಂಬಂದಿಸಿ ಮೂರನೇ ಎಫ್ ಐ ಆರ್ ದಾಖಲಾಗಿದೆ.

ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ ಗಲಾಟೆ ಮಾಡುತ್ತಿದ್ದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಬಂಧಿಸಲಾಗಿತ್ತು.

ಗುಂಪುಗೂಡಿ ಗಲಾಟೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಸೇರಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಮೂರು ಎಫ್ ಐಆರ್ ದಾಖಲಿಸಲಾಗಿದೆ. ಈ ಕುರಿತು ಕಾಟನ್ ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this article

ಟಾಪ್ ನ್ಯೂಸ್