ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇದೀಗ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತಿತರರ ವಿರುದ್ಧ ಇದೀಗ ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಾಗಿದೆ.
ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಆಪಾದಿಸಿ ರಾದ್ದಾಂತ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಬಂಧಿಸಿದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಇಂದು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಇದೀಗ ಅವರ ವಿರುದ್ಧ FIR ದಾಖಲಾಗಿದೆ.
ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇದೀಗ FIR ದಾಖಲಾಗಿದೆ. ಪುನೀತ್ ಕೆರೆಹಳ್ಳಿ A1 ಹಾಗೂ ಪ್ರತಾಪ್ ಸಿಂಹ A2 ಆರೋಪಿ ಎಂದು ಉಲ್ಲೇಖಿಸಲಾಗಿದೆ.