Breaking:

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ

ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

47 ವರ್ಷದ ಮಹಿಳೆಯಿಂದ ಬೆಂಗಳೂರಿನ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.

Share this article

ಟಾಪ್ ನ್ಯೂಸ್