Breaking:

ಸ್ವಯಂ ಉದ್ಯೋಗಕ್ಕೆ 5 ಲಕ್ಷ ಬಡ್ಡಿರಹಿತ ಸಾಲ: ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ?

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ‘ಲಖ್‌ಪತಿ ದೀದಿ ಯೋಜನೆ’ ಜಾರಿಗೆ ತಂದಿದೆ.

ಸ್ವಯಂ ಉದ್ಯೋಗ ಕಲ್ಪಿಸಿ ಬಡತನ ನಿರ್ಮೂಲನೆ ಮೂಲಕ ಮಹಿಳೆಯರು ಆರ್ಥಿಕ ಸಬಲರಾಗುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ.

ಈ ಯೋಜನೆಯಲ್ಲಿ 5 ಲಕ್ಷ ರೂಪಾಯಿವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ ತಮ್ಮ ಸ್ವಂತ ಉದ್ಯಮವನ್ನು ಆರಂಭಿಸಿ ತಮ್ಮದೇ ಕಾಲುಗಳ ಮೇಲೆ ನಿಂತು ಬದುಕು ಕಟ್ಟಿಕೊಳ್ಳಲು ಈ ಸಾಲ ಸೌಲಭ್ಯ ನೆರವಾಗುತ್ತದೆ.

ಈ ಯೋಜನೆಯ ಭಾಗವಾಗಿ, ಆಗಸ್ಟ್ 25ರಂದು ಪ್ರಧಾನಿ ಮೋದಿ ಅವರು 11 ಲಕ್ಷ ಮಹಿಳೆಯರಿಗೆ ಲಖ್‌ಪತಿ ದೀದಿ ಯೋಜನೆ ಪ್ರಮಾಣಪತ್ರ ನೀಡಿದರು. ಈ ಯೋಜನೆಯ ಭಾಗವಾಗಿ 2500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹೇಳುವ ಪ್ರಕಾರ, ಈ ಯೋಜನೆಯಿಂದ 4.3 ಲಕ್ಷ ಸ್ವಸಹಾಯ ಗುಂಪುಗಳಲ್ಲಿ 48 ಲಕ್ಷ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ.



ಈ ಯೋಜನೆಯ ಪ್ರಯೋಜನ ಪಡೆಯಲು ಮಹಿಳಾ ಅರ್ಜಿದಾರರು ತಾವು ಅರ್ಜಿ ಸಲ್ಲಿಸುವ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು.
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಈ ಯೋಜನೆಯಡಿಯಲ್ಲಿ ಮಹಿಳೆಯರನ್ನು ಸ್ವ-ಸಹಾಯ ಗುಂಪುಗಳೊಂದಿಗೆ ಅನುಸಂಧಾನ ಮಾಡಲಾಗಿದೆ. ಇಲ್ಲಿ ಎಲ್‌ಇಡಿ ಲೈಟ್‌ಗಳ ತಯಾರಿಕೆ, ಪ್ಲಂಬಿಂಗ್ ಮತ್ತು ಡ್ರೋನ್ ರಿಪೇರಿ ತರಬೇತಿ ಪಡೆಯಬಹುದು. ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ತಂತ್ರಜ್ಞಾನದ ಸೇರ್ಪಡೆಗೆ ಈ ಡ್ರೋನ್‌ಗಳು ಸಹಾಯ ಮಾಡುತ್ತವೆ.

ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಬೇಕಾಗಿರುವ ದಾಖಲೆಗಳು
ವಸತಿ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಪಡಿತರ ಚೀಟಿ
ಆದಾಯ ಪ್ರಮಾಣ ಪತ್ರ
ಬ್ಯಾಂಕ್ ಖಾತೆ
ಮೊಬೈಲ್ ಸಂಖ್ಯೆಯ ಅಗತ್ಯವಿದೆ.

ಅಂಗನವಾಡಿ ಕೇಂದ್ರವು ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ. ಅಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಲಾಗುತ್ತದೆ.
ಲಕ್‌ಪತಿ ದೀದಿ ಯೋಜನೆಗಾಗಿ ಅರ್ಜಿ ನಮೂನೆಯನ್ನು ಪಡೆದು ನಿಮ್ಮ ವಿವರಗಳನ್ನು ಭರ್ತಿ ಮಾಡಿ.
ನಿಗದಿತ ಕಚೇರಿ ಅಥವಾ ಅಂಗನವಾಡಿ ಕೇಂದ್ರದಲ್ಲಿ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗಿದೆ.



Share this article

ಟಾಪ್ ನ್ಯೂಸ್