Breaking:

ಸರಕಾರಿ ಬಸ್ & ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು.

ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್