ಮಳೆಯಿಂದಾಗಿ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲುಬಂಡೆ ಉರುಳಿದ್ದು, ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲೂಕಿನ ಸಂಗಾಪುರದ 2ನೇ ವಾಡರ್ ಗದ್ವಾಲ್ ಏರಿಯಾದ ಸಮೀಪದಲ್ಲಿರುವ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿದೆ. ಐದಾರು ಮನೆಗಳಿಗೆ ಹಾನಿಯಾಗುವುದು ಕೂದಲೆಳೆಯ ಅಂತರದಿಂದ ತಪ್ಪಿ ಹೋಗಿದೆ.
ಉರುಳಿ ಬಂದ ಬಂಡೆ ಕುಡಿಯುವ ನೀರಿಗಾಗಿ ಹಾಕಲಾಗಿದ್ದ ನಾಲ್ಕು ಇಂಚು ಗಾತ್ರದ ಕಬ್ಬಿಣದ ಪೈಪ್ ನಿಂದಾಗಿ ನಿಂತುಕೊಂಡಿದೆ. ಇದರಿಂದ ನಾಲ್ಕೈದು ಮನೆಯಲ್ಲಿ ವಾಸವಿದ್ದ ಸುಮಾರು 20ಕ್ಕೂ ಹೆಚ್ಚು ಜನರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಬ್ಬಿಣದ ಪೈಪ್ ಲೈನ್ ಕಲ್ಲು ಬಂಡೆಯನ್ನು ಹಿಡಿದು ನಿಲ್ಲಿಸದೇ ಇದ್ದರೆ ಗಾಢ ನಿದ್ರೆಯಲ್ಲಿದ್ದ ಐದಾರು ಕುಟುಂಬದ ಸದಸ್ಯರಿಗೆ ಅಪಾಯ ಉಂಟಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿ ಲೋಕೇಶ್ ರಾಠೋಡ್ ತಿಳಿಸಿದ್ದಾರೆ.