ಬಾತ್‌ರೂಮ್‌ನಲ್ಲಿ ಗೀಸರ್ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭಾ (40), ದಿಲೀಪ್ (17) ಮೃತ ದುರ್ದೈವಿಗಳು.
ದಿಲೀಪ್ ಬಿಸಿ ನೀರು ಕಾಯಿಸಲು ಗ್ಯಾಸ್ ಗೀಜರ್ ಆನ್ ಮಾಡಿದ್ದ. ಈ ವೇಳೆ ಅನಿಲ ಸೋರಿಕೆಯಾಗಿ ಆತ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ತಡವಾದರೂ ಮಗ ಬಾತ್ ರೂಂನಿಂದ ಬಾರದೇ ಇದ್ದಾಗ, ಆತನನ್ನು ಹುಡುಕಿಕೊಂಡು ಬಾತ್‌ರೂಮ್‌ಗೆ ಬಂದ ಶೋಭಾ ವಿಷ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಇದನ್ನು ಕಂಡು ಇತರರು ಇಬ್ಬರನ್ನೂ ಕೂಡ ತಕ್ಷಣ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಅದಾಗಲೇ ಅವರಿಬ್ಬರು ಮೃತಪಟ್ಟಿದ್ದರು.
ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.