Breaking:

ಉತ್ತರಪ್ರದೇಶದ ಗೊಂಡಾದಲ್ಲಿ ರೈಲು ಅವಘಡಕ್ಕೆ ಕಾರಣವೇನು? ತನಿಖಾ ತಂಡ ಹೇಳಿದ್ದೇನು?

ಉತ್ತರಪ್ರದೇಶದ ಗೊಂಡಾದಲ್ಲಿ ಗುರುವಾರ ಚಂಡೀಗಢ-ದಿಬ್ರೂಗಢ ಎಕ್ಸಪ್ರೆಸ್‌ ರೈಲು ಹಳಿತಪ್ಪಿ  ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ರೈಲ್ವೆ ಅಧಿಕಾರಿಗಳ ತಂಡವು ದುರಂತಕ್ಕೆ ಕಾರಣವನ್ನು ಪತ್ತೆ ಹಚ್ಚಿದೆ.

ಅಧಿಕಾರಿಗಳು ತನಿಖೆಯ ವೇಳೆ ರೈಲು ಹಳಿಯನ್ನು ಸರಿಯಾಗಿ ಜೋಡಿಸದಿರುವುದೇ ಅಪಘಾತಕ್ಕೆ ಕಾರಣ ಎಂದು ಪತ್ತೆ ಹಚ್ಚಿದ್ದಾರೆ.

ಐವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಆದರೆ ತನಿಖಾ ಸಮಿತಿಯ ವರದಿಯ ಆಧಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ ಎಂದು ಈಶಾನ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ಮೋತಿಗಂಜ್‌ ಮತ್ತು ಝಿಲಾಹಿ ರೈಲು ನಿಲ್ದಾಣಗಳ ಮಧ್ಯೆ ಚಂಡೀಗಢ-ದಿಬ್ರೂಗಢ ಎಕ್ಸಪ್ರೆಸ್‌ ರೈಲು ಗುರುವಾರ ಹಳಿ ತಪ್ಪಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

Share this article

ಟಾಪ್ ನ್ಯೂಸ್