ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂದಿಸಿ ಕೊಲೆ ಆರೋಪಿ ಮೋಹನ್ ನಾಯಕ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಬೇಲಾಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದ್ದು, ಕವಿತಾ ಲಂಕೇಶ್ ಅವರು ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.
ಅಂತಿಮವಾಗಿ ಮೇಲ್ಮನವಿಗಳನ್ನು ಪರಿಗಣಿಸಲು ನಿರಾಕರಿಸಿದ ಪೀಠವು ಆರೋಪಿಯು ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದರೆ ಅಥವಾ ವಿಚಾರಣೆಯನ್ನು ವಿಳಂಬಗೊಳಿಸಿದರೆ ಜಾಮೀನು ರದ್ದುಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕಕ್ಷಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿದೆ.