ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬೆನ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೋಟಿಸ್ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಲಾಗಿದೆ.
ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ಗೆ ವಿವರಣೆ ನೀಡುವ ಬಗ್ಗೆ ಹಾಗೂ ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ಚರ್ಚೆಯಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನ ಹೊರಬೀಳಲಿದೆ.