ಸರ್ಕಾರಿ ನೌಕರರು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ, ಸಭೆಗಳಲ್ಲಿ ಭಾಗವಹಿಸುವುದಕ್ಕಿದ್ದ ನಿಷೇಧವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ನಾಯಕರು ಈ ಕುರಿತ ಆದೇಶದ ಪ್ರತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’ ನಲ್ಲಿ ಹಂಚಿಕೊಂಡಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ಕುರಿತು ಪೋಸ್ಟ್ ಮಾಡಿದ್ದಾರೆ.
58 ವರ್ಷಗಳ ಹಿಂದೆ ಅಂದರೆ 1966 ರಲ್ಲಿ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ವಿಧಿಸಿದ್ದ ಅಸಂವಿಧಾನಿಕ ನಿಷೇಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. 1966ರ ನವೆಂಬರ್ 7ರಂದು ಸಂಸತ್ತಿನಲ್ಲಿ ಗೋಹತ್ಯೆ ವಿರುದ್ಧ ಭಾರಿ ಪ್ರತಿಭಟನೆ ನಡೆದ ಕಾರಣ ಈ ನಿಷೇಧ ಹೇರಲಾಗಿದೆ ಎಂದು ಹೇಳಿದ್ದಾರೆ.
1948 ಫೆಬ್ರವರಿಯಲ್ಲಿ ಗಾಂಧೀಜಿ ಹತ್ಯೆಯ ನಂತರ ಸರ್ದಾರ್ ಪಟೇಲ್ ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದರು. ಇದರ ನಂತರ ಉತ್ತಮ ನಡವಳಿಕೆಯ ಭರವಸೆಯ ಮೇಲಿನ ನಿಷೇಧವನ್ನು ತೆಗೆದುಹಾಕಲಾಯಿತು. ಇದಾದ ನಂತರವೂ ಆರ್‌ಎಸ್‌ಎಸ್ ನಾಗಪುರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಿಲ್ಲ. ನಡವಳಿಕೆ ಸರಿಪಡಿಸಿಲ್ಲ ಇದರಿಂದ ಮತ್ತೆ ನಿಷೇಧ ಹೇರಲಾಗಿತ್ತು ಎಂದು ಹೇಳಿದ್ದಾರೆ.