Breaking:

ಭಾರೀ ಮಳೆಗೆ ಆಸ್ಪತ್ರೆಯೊಳಗೆ ನುಗ್ಗಿದ ನೀರು; ರೋಗಿಗಳ ಪರದಾಟ

ಭಾರೀ ಮಳೆಯಿಂದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

ಭಾರೀ ಮಳೆಯ ಪರಿಣಾಮ ಚರಂಡಿಯಲ್ಲಿ ಹರಿಯಬೇಕಿದ್ದ ನೀರು ಆಸ್ಪತ್ರೆಯ ವಾರ್ಡ್ ಗಳಲ್ಲಿ ಬಂದು ನಿಂತಿದ್ದು, ಸುಮಾರು ಎರಡೂ ಅಡಿಗೂ ಹೆಚ್ಚು ನೀರು ನಿಂತಿದ್ದರಿಂದ ರೋಗಿಗಳು ರಾತ್ರಿ ನಿದ್ದೆ ಮಾಡದೆ ಪರದಾಡುವಂತಾಗಿದೆ.

ಈ ಅವ್ಯವಸ್ಥೆಗೆ  ಸರ್ಕಾರಿ ಆಸ್ಪತ್ರೆಯ ಆಡಳಿತದ ವೈಫಲ್ಯವೇ ಇದಕ್ಕೆಲ್ಲ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Share this article

ಟಾಪ್ ನ್ಯೂಸ್