Breaking:

ತಾಯಿಯನ್ನು ಕೊಂದು ” ಕ್ಷಮಿಸು ತಾಯಿ” ಎಂದು ಇನ್ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

ಮಗನೋರ್ವ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದ್ದು, ಈತ ಕೃತ್ಯದ ಬಳಿಕ ನಿನ್ನನ್ನು ಕೊಂದಿದ್ದಕ್ಕೆ ನನ್ನ ಕ್ಷಮಿಸಿ ಬಿಡು ಅಮ್ಮ ಎಂದು ಕ್ಯಾಪ್ಷನ್ ಹಾಕಿದ್ದಾನೆ.

ನಿಲೇಸ್ ಗೋಸಾಯಿ ಎಂಬಾತ ತನ್ನ ತಾಯಿ ಜ್ಯೋತಿ ಬೆನ್ ಅವರನ್ನು ಕತ್ತು ಹಿಸುಕಿ ಕೊಂದಿದ್ದು, ಇದಾದ ಬಳಿಕ ಆರೋಪಿ ಮಗ ತನ್ನ ಇನ್ಸ್ಟಾಗ್ರಾಂನಲ್ಲಿ ತನ್ನ ತಾಯಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾನೆ. ತನ್ನ ಸ್ಟೇಟಸ್ನಲ್ಲಿ ಕ್ಷಮಿಸಿ ಬಿಡು ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ನಾನು ನಿನ್ನನ್ನು ಕಳೆದುಕೊಂಡಿದ್ದೇನೆ, ಓಂ ಶಾಂತಿ ಎಂದು ಬರೆದಿದ್ದಾನೆ.

ಆರೋಪಿ ಯುವಕ ಈಗ ರಾಜ್‌ಕೋಟ್ ನಗರದ ವಿಶ್ವವಿದ್ಯಾಲಯ ಪೊಲೀಸರ ವಶದಲ್ಲಿದ್ದಾನೆ.

ಕೊಲೆ ನಡೆದ ನಂತರ ಭರತ್ ಎಂಬ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು 48 ವರ್ಷದ ಜ್ಯೋತಿಬೆನ್ ಗೋಸಾಯಿ ಅವರ ಶವವನ್ನು ಆಕೆಯ ಮನೆಯಿಂದ ಹೊರತೆಗೆದಿದ್ದಾರೆ. ಆಕೆಯನ್ನು ಕೊಂದ ಮಗ ನಿಲೇಶ್ ಗೋಸಾಯಿಯನ್ನು ವಿಚಾರಣೆಗೊಳಪಡಿಸಿದ್ದು, ಆತ ತಾಯಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ನೀಲೇಶ್ ಮೊದಲು ಚಾಕುವಿನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದು, ತಾಯಿ ಆ ಚಾಕು ಕಿತ್ತುಕೊಂಡಿದ್ದರಿಂದ ರಕ್ತಸ್ರಾವ ಉಂಟಾಗಿದ್ದು ಬೆಳಕಿಗೆ ಬಂದಿದೆ. ಇದಾದ ಬಳಿಕ ತಾಯಿಯ ಬಾಯಿ ಹಾಗೂ ಗಂಟಲನ್ನು ಕಂಬಳಿಯಿಂದ ಒತ್ತಿ ಹತ್ಯೆ ಮಾಡಿದ್ದಾನೆ.

Share this article

ಟಾಪ್ ನ್ಯೂಸ್