ವಿಟ್ಲ: ಭಾರೀ ಮಳೆಗೆ ಕಂಪೌಂಡು ಕುಸಿದು ಮನೆಗೆ ಹಾನಿಯಾದ ಘಟನೆ ವಿಟ್ಲದ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಹಮೀದ್ ಎಂಬವರ ಮನೆಯ ಕಂಪೌಂಡು ಕುಸಿದು ಮನೆಗೆ ಹಾನಿಯಾಗಿದ್ದು, ಮಳೆ ನೀರು ಮನೆ ಒಳಗೆ ನುಗ್ಗಿ ಅಪಾರ ಹಾನಿಯಾಗಿದೆ.
ಸ್ಥಳಕ್ಕೆ ಪ.ಪಂ ಮುಖ್ಯಧಿಕಾರಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ.ಪಂ ಸದಸ್ಯ ಕರುಣಾಕರ ನಾಯ್ತೊಟ್ಟು, ಹಸೈನಾರ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.