Breaking:

ಹೃದಯ ವಿದ್ರಾಹಕ ಘಟನೆ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೈಕ್‌ ನಲ್ಲಿ ತೆರಳುತ್ತಿದ್ದವರ ಮೇಲೆ ಮರವೊಂದು ಬಿದ್ದು  ಇಬ್ಬರು ಸವಾರರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.

ಮಾಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು.

ಇವರು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಬೈಕ್ ನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ.

Share this article

ಟಾಪ್ ನ್ಯೂಸ್