Breaking:

ಏನಿದು ಮಲಯಾಳಂ ಚಿತ್ರರಂಗವನ್ನು ಅಲ್ಲೋಲ- ಕಲ್ಲೋಲಗೊಳಿಸಿದ ಹೇಮಾ ಸಮಿತಿ ವರದಿ?

ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಮೇಲೆ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ರಾಷ್ಟ್ರವ್ಯಾಪಿ ಭಾರಿ ಸದ್ದು ಮಾಡಿತ್ತು. ಇಂದಿಗೂ ಈ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ.

ಈ ಪ್ರಕರಣದ ಬೆನ್ನಲ್ಲೇ ನ್ಯಾಯಾಮೂರ್ತಿ ಕೆ. ಹೇಮಾ (ನಿವೃತ್ತ) ಅವರ ನೇತೃತ್ವದಲ್ಲಿ ಮಾಜಿ ಅಧಿಕಾರಿ ಕೆಬಿ ವಲ್ಸಲಕುಮಾರಿ ಮತ್ತು ಹಿರಿಯ ನಟಿ ಶಾರದಾ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಕೇರಳ ಸರ್ಕಾರ ರಚನೆ ಮಾಡಿತ್ತು.

ಈ ಸಮಿತಿ 2019ರ ಡಿಸೆಂಬರ್​ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನಾಲ್ಕೂವರೆ ವರ್ಷಗಳ ಬಳಿಕ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದ್ದು, ಮಲಯಾಳಂ ಚಿತ್ರರಂಗದ ಕರಾಳ ಮುಖ ಅನಾವರಣವಾಗಿದೆ.

ಮಲಯಾಳಂ ಸಿನಿರಂಗದ ಒಂದೊಂದೆ ಕರಾಳ ಮುಖವಾಡ ಕಳಚಿ ಬೀಳುತ್ತಿದೆ. ಸಿನಿಮಾದಲ್ಲಿ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ಲೈಂಗಿಕ ಶೋಷಣೆ ನಡೆಯುತ್ತಿದೆ. ಆದರೆ, ಸಿನಿಮಾರಂಗದಲ್ಲಿ ವ್ಯಾಪಕವಾಗಿದೆ ಎಂಬುವುದನ್ನು ವರದಿಯು ಸಾರ್ವಜನಿಕಗೊಳಿಸಿದೆ.

ಹೇಮಾ‌ ಸಮಿತಿ ವರದಿ ಬೆನ್ನಲ್ಲಿ ಅನೇಕ ನಟಿಯರು ತಾವು ಎದುರಿಸಿದ ಕಹಿ ಘಟನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದ ಹಿರಿಯ ನಟರಾದ ಜಯಸೂರ್ಯ, ಸಿದ್ದೀಕ್, ಮುಖೇಶ್, ರಿಯಾಝ್ ಖಾನ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಕೇಳಿ ಬಂದಿದೆ.

Share this article

ಟಾಪ್ ನ್ಯೂಸ್