ಮೂಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ವಿಪಕ್ಷಗಳು ಆಗ್ರಹಿಸುತ್ತಿದೆ.ಈ ಮಧ್ಯೆ ಕಾಂಗ್ರೆಸ್ ಪಕ್ಷವು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ.
ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ ಪರಮೇಶ್ವರ್, ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ.ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಲ್ಲಲಿದೆ. ಈಗಾಗಲೇ ಹೈಕಮಾಂಡ್ ನಾಯಕರು ಬೆಂಬಲ ನಿಲ್ಲುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ರಾಜ್ಯದಲ್ಲಿನ ಬೆಳವಣಿಗೆ ಕುರಿತು ಹೈಕಮಾಂಡ್ ಮಾಹಿತಿ ನೀಡಲಿದ್ದಾರೆ. ಅದನ್ನು ಹೊರತುಪಡಿಸಿದರೆ ಬೇರೆ ವಿಶೇಷವೇನು ಇಲ್ಲ ಎಂದು ಹೇಳಿದ್ದಾರೆ.