ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಹಕ ಘಟನೆ ಹೊಸನಗರದಲ್ಲಿ ನಡೆದಿದೆ.
ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ(32) ಇಬ್ಬರು ಮಕ್ಕಳಾದ ಸಮರ್ಥ(12), ಸಂಪದ (6) ಅವರನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರ ಠಾಣೆ ಪಿಎಸ್‌ಐ ರಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾವಿಯಿಂದ ತೆಗೆದು ಆಸ್ಪತ್ರೆಗೆ ಸೇರಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.