ಜಾಫರ್,ಮುಸ್ತಫಾ, ಶೊಹೇಬ್ ಮೃತರು.
ಓಮ್ನಿ ಕಾರಿನ ಟಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ.
ಮೃತರೆಲ್ಲರೂ ಒಂದೇ ಕುಟುಂಬದರಾಗಿದ್ದು, ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ
ಮೃತರನ್ನು ಜಾಫರ್ ಸಾಬ್(60), ಮುಸ್ತಫಾ ಸಾಹೇಬ್ (36) ಶೊಹೇಬ್(06) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು,
ಗಾಯಾಳುಗಳನ್ನು ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ