Breaking:

ಐಐಟಿ ಘಟಿಕೋತ್ಸವದಲ್ಲಿ ಗಾಝಾ ಹತ್ಯಾಕಾಂಡದ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿ

ಚೆನ್ನೈ: ಐಐಟಿ-ಮದ್ರಾಸ್‌ನ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರ ಪ್ರಶಸ್ತಿಗೆ ಭಾಜನರಾದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರ ಧನಂಜಯ ಬಾಲಕೃಷ್ಣನ್ ಗಾಝಾದಲ್ಲಿ ನ ಹತ್ಯಾಕಾಂಡವನ್ನು ಖಂಡಿಸಿದ್ದಾರೆ.

ಧನಂಜಯ ಬಾಲಕೃಷ್ಣನ್ ಮಾತನಾಡುತ್ತಾ, ವಿಜ್ಞಾನ,ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತವನ್ನು ಐತಿಹಾಸಿಕವಾಗಿ ಇಸ್ರೇಲ್‌ನಂತಹ ಸಾಮ್ರಾಜ್ಯಶಾಹಿ ಶಕ್ತಿಗಳಿಗೆ ನೆರವಾಗಲು ಬಳಸಲಾಗಿದೆ ಎಂದು ಹೇಳಿದ್ದಾರೆ. ಅತ್ಯಂತ ಮಹತ್ವದ ವಿಷಯವನ್ನು ಹೇಳಲು ನಾನು ಈ ವೇದಿಕೆಯನ್ನು ಬಳಸದಿದ್ದರೆ ಅದು ಅನ್ಯಾಯವಾಗುತ್ತದೆ. ಫೆಲೆಸ್ತೀನ್‌ನಲ್ಲಿ ಹತ್ಯಾಕಾಂಡ ನಡೆಯುತ್ತಿದೆ. ಜನರು ಸಾಯುತ್ತಿದ್ದಾರೆ. ಇದು ಕೊನೆಯಾಗುತ್ತಿಲ್ಲ. ಈ ವೇದಿಕೆಯ ಮೂಲಕ ಗಾಝಾ ನರಮೇಧದ ವಿರುದ್ಧ ಕ್ರಮಕ್ಕೆ ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಜಾತಿ, ವರ್ಗ, ಜನಾಂಗ ಮತ್ತು ಲಿಂಗದ ಆಧಾರದಲ್ಲಿ ತುಳಿತಕ್ಕೊಳಗಾದವರನ್ನು ವಿಮೋಚನೆಗೊಳಿಸಲು ನಾವು ಏನು ಮಾಡಬಹುದು ಎನ್ನುವುದನ್ನು ತಿಳಿದುಕೊಳ್ಳಲು ಪ್ರಯತ್ನಿಸುವ ಮೂಲಕ ಈ ಅರಿವನ್ನು ನಮ್ಮ ದೈನಂದಿನ ಜೀವನದಲ್ಲಿ ಹೆಚ್ಚು ಹೆಚ್ಚಾಗಿ ಅಳವಡಿಸಿಕೊಳ್ಳಬಹದು ಎಂದು ನಾನು ಆಶಿಸಿದ್ದೇನೆ ಎಂದು ಇದೇ ವೇಳೆ ಧನಂಜಯ್ ಹೇಳಿದ್ದಾರೆ.

 

Share this article

ಟಾಪ್ ನ್ಯೂಸ್