ಉಕ್ರೇನ್ ಜೊತೆಗಿನ ಯುದ್ಧಕ್ಕೆ ರಷ್ಯಾ ನೇಮಿಸಿದ್ದ ಭಾರತೀಯ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದ್ದು, ಈ ಯುದ್ಧದಲ್ಲಿ ಭಾಗವಹಿಸಿದ್ದ ಹರಿಯಾಣದ ಕೈತಾಲ್ ಜಿಲ್ಲೆ ಮಾತೋರ್ ಗ್ರಾಮದ ರವಿ ಮೌನ್ ಮೃತಪಟ್ಟಿದ್ದಾರೆ. ರವಿ ಸಾವಿನ ಬಗ್ಗೆ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.
ಕಳೆದ ಐದು ತಿಂಗಳಿನಿಂದ ರಶ್ಯದಲ್ಲಿರುವ ರವಿ ಬಗ್ಗೆ ಮಾಹಿತಿ ಇಲ್ಲದ ಕಾರಣ ರವಿ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಸಂದರ್ಭದಲ್ಲಿ, ಉಕ್ರೇನ್ ಜೊತೆ ನಡೆಯುತ್ತಿರುವ ಯುದ್ಧದಲ್ಲಿ ಭಾಗವಹಿಸಲು ರವಿಯನ್ನು ರಷ್ಯಾ ಸೇನೆ ಕಳುಹಿಸಿದೆ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ರವಿ ಅವರ ತಾಯಿ ಡಿಎನ್‌ಎ ವರದಿಯನ್ನು ಕಳುಹಿಸಿದರೆ, ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿ ಕುಟುಂಬದ ಸದಸ್ಯರಿಗೆ ತಿಳಿಸಿದೆ.