ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಲ್ಲಡ್ಕದ ದಿನೇಶ್(20) ಮತ್ತು ಭರತ್(24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ.
ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಬುಧವಾರ ರಾತ್ರಿ ಬೈಕ್ ನಲ್ಲಿ ಹೆಲ್ಮೆಟ್ ಹಾಕಿ ಬಂದ ಇಬ್ಬರು ಕಿಡಿಗೇಡಿಗಳು ಐವನ್ ಮನೆಗೆ ಕಲ್ಲುತೂರಾಟ ನಡೆಸಿ, ಪರಾರಿಯಾಗಿದ್ದರು.