Breaking:

ಜಮ್ಮು-ಕಾಶ್ಮೀರ, ಹರ್ಯಾಣ ವಿಧಾನಸಭೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಹೊಸದಿಲ್ಲಿ: ಚುನಾವಣಾ ಆಯೋಗವು ಇಂದು ಜಮ್ಮು & ಕಾಶ್ಮೀರ, ಹರ್ಯಾಣ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ.

ಹರಿಯಾಣದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 73 ಜನರಲ್, ಎಸ್ಸಿ 17 ಕ್ಷೇತ್ರಗಳಿದೆ.

ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್.4ರಂದು ಮತ ಎಣಿಕೆ ನಡೆದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.

Share this article

ಟಾಪ್ ನ್ಯೂಸ್