ಮಂಗಳೂರು: ಜೋಕಟ್ಟೆಯಲ್ಲಿ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆಯ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ.
ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದೂರುದಾರರಿಗೆ ಫಕೀರಪ್ಪ ಪರಿಚಯವಿದ್ದು, ಅವರ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
ಆಗಸ್ಟ್ 6 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ ಧಿಕ್ಕರಿಸಿದ ಫಕೀರಪ್ಪ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನುವುದು ತನಿಖೆಯ ವೇಳೆ ಬಯಲಾಗಿದೆ.