-ಮುಸ್ತಫಾ ಆತ್ಮಹತ್ಯೆ ಮಾಡಿಕೊಂಡ ಯುವಕ
ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕಳಾರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ( 33) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಟ ನಡೆಸಿದಾಗ ಹಳೆಯ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಮುಸ್ತಫಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮುಸ್ತಫಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.