ಉಳ್ಳಾಲದಲ್ಲಿ ಕಡಪ್ಪರ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಆತನ ತಂಡ ಈ ಕೃತ್ಯ ಎಸಗಿದೆ ಎನ್ನಲಾಗಿದೆ.
ಈ ಕೊಲೆಯಲ್ಲಿ ನೌಷದ್‌ನೊಂದಿಗೆ ನಾಟೇಕಲ್‌ನ ನಿಯಾಝ್, ಬಜಾಲ್‌ನ ತನ್ವೀರ್, ಪಡುಬಿದ್ರೆಯ ಇಕ್ಬಾಲ್ ಸಹಕರಿಸಿರುವ ಬಗ್ಗೆ ಮಾಹಿತಿಯಿದ್ದು, ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಾಥಮಿಕವಾಗಿ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆ ನಡೆದಿರುವುದು ದೃಡಪಟ್ಟಿದೆ. ಈ ಕುರಿತು ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಡಪ್ಪರ ಸಮೀರ್ ತನ್ನ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಪಂಪ್‌ವೆಲ್‌ನಲ್ಲಿರುವ ತನ್ನ ಫ್ಲ್ಯಾಟ್‌ಗೆ ತೆರಳುವ ಸಂದರ್ಭದಲ್ಲಿ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣದ ಬಳಿ ಸಮೀರ್ ಗೆ ಗ್ಯಾಂಗ್ ತಲವಾರಿನಿಂದ ಕಡಿದು ಕೊಲೆ ಮಾಡಿತ್ತು.