Breaking:

ಕೃತ್ಯಕ್ಕೆ ಮೊದಲು ಎರಡು ವೇಶ್ಯಾಗೃಹಗಳಿಗೆ ತೆರಳಿದ್ದ!; ಕಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯ ವೇಳೆ ಮತ್ತಷ್ಟು ಮಾಹಿತಿ ಬಯಲು

ನಗರದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಬರ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಬಯಲಾಗಿದ್ದು, ಕೃತ್ಯಕ್ಕೆ ಮೊದಲು ಕಾಮುಕ ಹಿಂದಿನ ದಿನ ರಾತ್ರಿ ನಗರದ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎನ್ನುವುದು ಬಯಲಾಗಿದೆ

ಆರೋಪಿ ಸಂಜಯ್ ರಾಯ್ ಆಗಸ್ಟ್ 8ರ ರಾತ್ರಿ ಕೋಲ್ಕತಾದ ಸೋನಾಗಚಿ ರೆಡ್ ಲೈಟ್ ಏರಿಯಾದಲ್ಲಿದ್ದ. ಅಲ್ಲಿ ಆತ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನಿಯರ್ ಡಾಕ್ಟರ್ ಮಲಗಿದ್ದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ಗೆ ಆತ ಪ್ರವೇಶಿಸುತ್ತಿರುವುದು ಮತ್ತು ಹೊರಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಆತನ ಬಂಧನಕ್ಕೆ ನೆರವಾಗಿವೆ.

ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ದೇಶದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಬದಲಾವಣೆಯಾಗಲು ಮತ್ತೊಂದು ಅತ್ಯಾಚಾರ ಪ್ರಕರಣಕ್ಕಾಗಿ ದೇಶ ಕಾಯಲು ಸಾಧ್ಯವಿಲ್ಲ ಎಂದು ಕಟುವಾಗಿ ಹೇಳಿದ್ದಾರೆ.

Share this article

ಟಾಪ್ ನ್ಯೂಸ್