ಕನಕಪುರದ ಮಳಗಾಳು ಗ್ರಾಮದ ಎನ್.ಕೆ. ಕಾಲೊನಿಯಲ್ಲಿ ದಲಿತ ಯುವಕನ ಕೈ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನಕಪುರ ಟೌನ್ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಶಾಂಕ್, ದರ್ಶನ್, ಪ್ರತೀಕ್ ಹಾಗೂ ಶಿವಶಂಕರ್ ಬಂಧಿತ ಆರೋಪಿಗಳು. ಘಟನೆಯ ಪ್ರಮುಖ ಆರೋಪಿ ಹರ್ಷ ಸೇರಿದಂತೆ ಉಳಿದ ಮೂವರು ತಲೆ ಮರೆಸಿಕೊಂಡಿದ್ದಾರೆ.
ಕೇಂದ್ರ ವಲಯದ ಐಜಿಪಿ ಲಾಬೂ ರಾಮ್ ಅವರು ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರೊಂದಿಗೆ ಕಾಲೊನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಐಜಿಪಿ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯರು ನಿರಾತಂಕದಿಂದ ಬದುಕುವಂತೆ ಪೊಲೀಸ್ ಭದ್ರತೆ ಒದಗಿಸಲಾಗುವುದು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.