Breaking:

ಸೇತುವೆ ಕುಸಿದು ನದಿಗೆ ಬಿದ್ದ ಲಾರಿ; ಶಿರೂರು ದುರ್ಘಟನೆ ಬೆನ್ನಲ್ಲಿ ಉತ್ತರಕನ್ನಡದಲ್ಲಿ ಮತ್ತೊಂದು ದುರಂತ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.

ಸೇತುವೆ ಮೇಲೆ ತಮಿಳುನಾಡು ಮೂಲದ ಲಾರಿ ಚಲಿಸುವಾಗ ಘಟನೆ ಸಂಭವಿಸಿದ್ದು ಲಾರಿ ಸಮೇತ ಚಾಲಕ ಕಾಳಿ ನದಿಗೆ ಬಿದ್ದಿದ್ದಾನೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ 41 ವರ್ಷಗಳ ಹಳೆ ಸೇತುವೆ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್​ಬಿ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ. 41 ವರ್ಷ ಹಳೆಯ ಸೇತುವೆಯನ್ನೇ ಬಳಸಲಾಗಿತ್ತು.

ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37) ಸಮೇತ ತಮಿಳುನಾಡು ಮೂಲದ SSM ಟ್ರಾನ್ಸಪೋರ್ಟ ಕಂಪನಿಯ TN-52 AC -6880 ನೊಂದಣಿಯ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಕಾಳಿ ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

 

 

Share this article

ಟಾಪ್ ನ್ಯೂಸ್