Breaking:

ಕಾರ್ಕಳ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಕಾರ್ಕಳ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು ಕಾರ್ಕಳದ ಅಭಯ್(23) ಎಂದು ಗುರುತಿಸಲಾಗಿದೆ.

ಅಭಯ್, ಅಲ್ತಾಫ್‌ಗೆ ಮಾದಕ ವಸ್ತು ನೀಡಿರುವುದು ತನಿಖೆಯ ವೇಳೆ ಬಯಲಾಗಿದೆ. ಕೃತ್ಯ ಎಸಗಿದ ಮೇಲೆ ಅಲ್ತಾಫ್ ತಪ್ಪಿಸಿ ಕೊಳ್ಳಲು ಅಭಯ್ ಸಹಕಾರ ನೀಡಲು ಪ್ರಯತ್ನಿಸಿರುವುದು ಕೂಡ ತನಿಖೆ ವೇಳೆ ತಿಳಿದು ಬಂದಿದೆ.

ಬಂಧಿತ ಅಭಯ್‌ನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್