ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.
ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ.
ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಕೊನೆಯುಸಿರೆಳೆದಿದ್ದಾರೆ.