Breaking:

ಕಾರ್ಕಳ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಯುವಕ ಮೃತ್ಯು

ಕಾರ್ಕಳ: ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಕಾರ್ಕಳ ಪುಕ್ಕೇರಿ ಬಳಿಯ ಫುಡ್ ಬಾಸ್ಕೆಟ್ ಮುಂಭಾಗದಲ್ಲಿ ನಡೆದಿದೆ.

ಮೃತ ಯುವಕನನ್ನು ಬೈಪಾಸ್ ನಿವಾಸಿ, ಕಾರ್ ಮೆಕ್ಯಾನಿಕ್ ನಿಝಾಂ (21) ಎಂದು ಗುರುತಿಸಲಾಗಿದೆ.

ಕಾರ್ಕಳದಿಂದ ಬೈಪಾಸ್ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೈಪಾಸ್ ನಿಂದ ಕಾರ್ಕಳದತ್ತ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸವಾರ ಕಾರ್ ಮೆಕ್ಯಾನಿಕ್ ನಿಝಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಕಾರ್ಕಳ ಸರ್ಕಾರಿ ಮೃತದೇಹ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ತಂದೆ ಇಯ್ತಿಯಾಜ್, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

Share this article

ಟಾಪ್ ನ್ಯೂಸ್