ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ತಡೆಯಾಜ್ಞೆ ನೀಡದಂತೆ ದೂರುದಾರರು ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ.
ದೂರುದಾರ ಪ್ರದೀಪ್ ಕುಮಾರ್ ಎಂಬುವವರು ಸಿಎಂ ಸಿದ್ದರಾಮಯ್ಯ ಕಾನೂನು ತಡೆಯಾಜ್ಞೆ ತರಬಾರದು ಎಂಬ ಕಾರಣಕ್ಕೆ ಹೈಕೋರ್ಟ್ ಗೆ ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿದ ಪ್ರದೀಪ್ ಕುಮಾರ್, ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದು, ಅವರು ತಡೆಯಾಜ್ಞೆ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಾದ ಆಲಿಸದಯೇ ಮಧ್ಯಂತರ ಆದೇಶವನ್ನಾಗಲಿ, ತಡೆಯಾಜ್ಞೆಯನ್ನಾಗಲಿ ನೀಡಬಾರದು ಎಂದು ಕೇವಿಯೆಟ್ ಅರ್ಜಿ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.