ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಕೋರಿಕೆ ಸೇರಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕೂಡ ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾಗೊಳಿಸಲಾಗಿದೆ.
ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಹೊರಬಿದ್ದಿದೆ. ಈ ಮೂಲಕ ಮೂರೂ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.