ಕಾಸರಗೋಡು: ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದಾಗ ಶಾಲು ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಮೃತಪಟ್ಟವರು.
ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ನಫೀಸಾ ಅವರ ಜೀವ ಉಳಿಸಲಾಗಲಿಲ್ಲ .
ಈ ಕುರಿತು ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.