ಕೋಲಾರ: ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರನ್ನು ಜಿಲ್ಲೆಯ ಕೆಜಿಎಫ್ನ ರಾಬರ್ಟ್ಸನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ನವೀನ್ ಜೈನ್, ಚೇತನ್ ಬಂಧಿತರು. ಇವರು ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಸಮಾಜವನ್ನು ಟೀಕಿಸಿ ಕಾರ್ಟೂನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು.
ಇದರಿಂದ ಸಿಟ್ಟಿಗೆದ್ದ ಮುಸ್ಲಿಂ ಸಮುದಾಯದ ಜನರು ರಾತ್ರಿ ರಾಬರ್ಟಸನ್‌ಪೇಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಆರೋಪಿಗಳನ್ನು ಬಂಧಿಸಿ, ಅವರಿಂದ ಕ್ಷಮೆ ಕೇಳಿಸಬೇಕೆಂದು ಒತ್ತಾಯಿಸಿದ್ದರು.
ಸ್ಥಳಕ್ಕೆ ಬಂದ ಡಿವೈಎಸ್‌ಪಿ ಪಾಂಡುರಂಗ ಮಾತುಕತೆ ನಡೆಸಿ ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.