ಅನ್ಯಕೋಮಿನ ಜೋಡಿ ಬೈಕ್ ನಲ್ಲಿ ಹೋಗುವಾಗ ಅಡ್ಡಗಟ್ಟಿ
ಜನರು ಪ್ರಶ್ನಿಸಿರುವ ಘಟನೆ ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.
ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ತಂಡವೊಂದು ಪ್ರಶ್ನಿಸಿದೆ.
ಈ ಕುರಿತು ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.