ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡು ವಧು ಮೃತಪಟ್ಟು, ವರ ಗಂಭೀರವಾಗಿರುವ ಆತಂಕಕಾರಿ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ಲಿಖಿತ ಶ್ರೀ ಹಾಗೂ ನವೀನ್ ಅವರ ಮದುವೆ ನಡೆದಿದೆ. ಬಳಿಕ ರೂಮ್ಗೆ ತೆರಳಿದ ಜೋಡಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದರ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವರ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.