ವಧು- ವರ ಮದುವೆ ದಿನ ಹೊಡೆದಾಡಿಕೊಂಡು ಮೃತಪಟ್ಟ ಆತಂಕಕಾರಿ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿತ್ತು
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ನವೀನ್ (29) ಹಾಗೂ ಲಿಖಿತಶ್ರೀ (20) ದುರಂತ ಅಂತ್ಯ ಕಂಡ ಜೋಡಿಯಾಗಿದ್ದಾರೆ.
ಜೋಡಿ ಮದುವೆಯಾದ ದಿನವೇ ರೂಮ್‌ಗೆ ಹೋಗುತ್ತಿದ್ದಂತೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಕೂಡ ಶಂಕೆ ಮೂಡಿತ್ತು.
ಈಗ ನವೀನ್ (29) ಹಾಗೂ ಲಿಖಿತಶ್ರೀ (20) ಮರಣೋತ್ತರ ಪರೀಕ್ಷೆ ವರದಿ ಕುಟುಂಬಸ್ಥರ ಹಾಗೂ ಪೊಲೀಸರ ಕೈ ಸೇರಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನ ಹೆಚ್ಚಾಗಿದೆ.
ಮರಣೋತ್ತರ ಪರೀಕ್ಷೆಯಲ್ಲಿ ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು ಎನ್ನುವುದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಒಪ್ಪಿಗೆಯಿಂದ ವಿವಾಹವಾಗಿದ್ದರು. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.