ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ನಡೆದಿದೆ.
ನಾಗೇಶ(56), ಸತ್ಯಲಕ್ಷ್ಮೀ (46) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ ರಾತ್ರಿ ಚಾಮರಾಜ ನಗರದ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕೊಳ್ಳೇಗಾಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.