Breaking:

ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ; ಸುಳ್ಳು ಹೇಳಿ ಪ್ರಾಂಶುಪಾಲರಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ; ಆರೋಪ

ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಕೈಯಿಂದ ರಕ್ತ ಸೋರುವುದನ್ನು ಗಮನಿಸಿದ ಪ್ರಾಂಶುಪಾಲರು ಪ್ರಥಮ ಚಿಕಿತ್ಸೆ ನೀಡಿ ಕೈಗೆ ಗ್ಲಾಸ್ ಬಿದ್ದಿದೆ ಎಂದು ಸುಳ್ಳು ಹೇಳಿ ಕಳುಹಿಸಿದ್ದಾರೆ.

ಇದೀಗ ನೈಜ ಘಟನೆ ಬಯಲಾಗುತ್ತಿದ್ದಂತೆ ಪ್ರಾಂಶುಪಾಲರ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಚೂರಿ ಇರಿತಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಚೂರಿಯಿಂದ ಇರಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.

 

Share this article

ಟಾಪ್ ನ್ಯೂಸ್