Breaking:

ಅಂಗನವಾಡಿ ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಪೋಟೋ ಕ್ಲಿಕ್ಕಿಸಿ ಮತ್ತೆ ಕಸಿದುಕೊಳ್ಳುವ ವಿಡಿಯೋ ವೈರಲ್; ಇಬ್ಬರು ಸಿಬ್ಬಂದಿಗಳು ಅಮಾನತು

ಕೊಪ್ಪಳ: ಅಂಗನವಾಡಿ ಮಕ್ಕಳ ತಟ್ಟೆಯಲ್ಲಿ ಮೊಟ್ಟೆಯಿಟ್ಟು ಪ್ರಾರ್ಥನೆ ಬಳಿಕ ಕಸಿದುಕೊಳ್ಳುವ ವಿಡಿಯೋ ವೈರಲ್ ಆಗಿದ್ದು,  ಇದರ ಬೆನ್ನಲ್ಲಿ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ‌ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ ನಂತರ ಮೊಟ್ಟೆ ಕಸಿದುಕೊಳ್ಳುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕವಾಗಿ ಟೀಕೆ ವ್ಯಕ್ತವಾಗುತ್ತಿದ್ದಂತೆ ಸಿಬ್ಬಂದಿಗಳ ಅಮಾನತು ನಡೆದಿದೆ.

ಕೊಪ್ಪಳ ಜಿಲ್ಲೆಯ ಅಂಗನವಾಡಿಗಳಲ್ಲಿ ಅವ್ಯವಸ್ಥೆ ಹಿನ್ನೆಲೆ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಸಿ.ಚಂದ್ರಶೇಖರ ನೇತೃತ್ವದಲ್ಲಿ ನ್ಯಾಯಾಧೀಶರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

 

Share this article

ಟಾಪ್ ನ್ಯೂಸ್