ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ.
ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದಾನೆ.
ಕಟಿಂಗ್ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ ಕಟಿಂಗ್ ಮಾಡಿಸಿಕೊಳ್ಳಲು ಯಮನೂರಸ್ವಾಮಿ ಬಂಡಿಹಾಳ ಕಟಿಂಗ್ ಶಾಪ್ಗೆ ಬಂದಿದ್ದರು.ಈ ವೇಳೆ ಕ್ಷೌರಿಕ ಮುದಕಪ್ಪ ಹಡಪದ ಹಾಗೂ ಯಮನೂರಸ್ವಾಮಿ ಬಂಡಿಹಾಳ ನಡುವೆ ಜಗಳ ಶುರುವಾಗಿತ್ತು. ಆಗ ಮುದಕಪ್ಪ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಸದ್ಯ ಆರೋಪಿ ಕ್ಷೌರಿಕ ಮುದಕಪ್ಪ ಹಡಪದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.