Breaking:

ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಢಿಕ್ಕಿ: ಇಬ್ಬರು ಯುವಕರು ಮೃತ್ಯು

ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ  ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಲಿಂಗಸಗರೂ ತಾಲೂಕಿನ ಅಡವಿಬಾವಿ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ಲಿಂಗಸಗೂರು ಹೊರವಲಯದ ಕರಡಕಲ್ ಗ್ರಾಮದ ನಿವಾಸಿಗಳಾದ ವಿರೇಶ್ (25), ಚನ್ನಬಸವ (24) ಮೃತ ದುರ್ದೈವಿಗಳು.

ಇವರು ನಾರಾಯಣಪುರ ಜಲಾಶಯದತ್ತ ಹೊರಟ್ಟಿದ್ದು, ಇದೇ ವೇಳೆ ಮುದ್ದೇಬಿಹಾಳ ಕಡೆಯಿಂದ ಲಿಂಗಸಗೂರಿನತ್ತ ಬಸ್‌ ಬರುತ್ತಿತ್ತು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿರೇಶ್‌ ಹಾಗೂ ಚನ್ನಬಸವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಲಿಂಗಸಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಈ ಕುರಿತು ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್