ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಟೀಕೆಗೆ ಗುರಿಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ ಅವರನ್ನು
ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯಿಂದ ಕೊನೆಯ ಕ್ಷಣದಲ್ಲಿ ರಾಜ್ಯ ಸರಕಾರ ಕೈಬಿಟ್ಟಿದೆ.
ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿದ್ದಾಗ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆವರಣದಲ್ಲೇ ತಡೆದು ಪ್ರವೇಶ ನಿರಾಕರಿಸಿದ್ದರು.
ಇದೀಗ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದರ ಬಗ್ಗೆ ಒಂದು ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಆಕ್ರೋಶಕ್ಕೆ ಮಣಿದ ಸರಕಾರ ರಾಮಕೃಷ್ಣ ಅವರ ಪ್ರಶಸ್ತಿಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ.