Breaking:

ಕುವೈಟ್ ನಲ್ಲಿ ಭೀಕರ ಅಗ್ನಿ ಅವಘಡ; ಕೇರಳದ ದಂಪತಿ & ಇಬ್ಬರು ಮಕ್ಕಳು ಮೃತ್ಯು

ಕುವೈಟ್ ನ ಮನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೇರಳದ ಮ್ಯಾಥ್ಯೂ ಮುಲಕಲ್, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್ ಮತ್ತು ಐರಿನ್ ಅವಘಡದಲ್ಲಿ ಸಾವನ್ನಪ್ಪಿದ್ದಾರೆ.

ಮ್ಯಾಥ್ಯೂ ಕುವೈತ್‌ನಲ್ಲಿ ಉದ್ಯೋಗದಲ್ಲಿದ್ದು, ಅಬ್ಬಾಸಿಯಾದಲ್ಲಿ ಕಳೆದ 15 ವರ್ಷದಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಶುಕ್ರವಾರ ರಾತ್ರಿ  ಮನೆಯಲ್ಲಿ ಎ.ಸಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ.

ಕೊಚ್ಚಿ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಲಕಲ್ ಅವರು ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಕಳೆದ ಗುರುವಾರ ಅವರು ತಮ್ಮ ಮಕ್ಕಳು ಹಾಗೂ ಪತ್ನಿಯೊಂದಿಗೆ ರಜೆ ಮುಗಿಸಿ ಕುವೈತ್‌ಗೆ ವಾಪಾಸ್ಸಾಗಿದ್ದರು.

 

 

Share this article

ಟಾಪ್ ನ್ಯೂಸ್